ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ದೆಹಲಿ: ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಇದು ಇನ್ನು ಕಾಯ್ದೆಯಾಗಿ ಜಾರಿಗೆ ಬರಲಿದೆ.

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ನರೇಂದ್ರ ಮೋದಿ ಸರಕಾರದ ಮಹತ್ವಾಕಾಂಕ್ಷಿ ಪೌರತ್ವ ತಿದ್ದುಪಡಿ ಯೋಜನೆ ಲೋಕಸಭೆಯಲ್ಲಿ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರ ಪಡೆದಿತ್ತು. ಈ ಮಸೂದೆಗೆ ರಾಷ್ಟ್ರಪತಿ ಕೂಡಾ ಅಂಕಿತ ಹಾಕಿದ್ದಾರೆ.

ಅತ್ತ ಈಶಾನ್ಯ ರಾಜ್ಯಗಳಲ್ಲಿ ಈ ಮಸೂದೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದಂತೆಯೇ, ಇನ್ನೊಂದೆಡೆ ಈ ಮಸೂದೆಗೆ ರಾಷ್ಟ್ರಪತಿ ಕೂಡ ಮುದ್ರೆ ಒತ್ತಿದ್ದು, ನೂತನ ಕಾಯ್ದೆ ಜಾರಿಗೆ ಹಾದಿ ಸುಗಮವಾಗಿದೆ.

ಪಾಕಿಸ್ಥಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನ ದೇಶಗಳಲ್ಲಿ ಧಾರ್ಮಿಕ ಕಿರುಕುಳ ಅನುಭವಿಸಿ 2014ರ ಡಿಸೆಂಬರ್ 31ರ ಒಳಗೆ ಭಾರತಕ್ಕೆ ಆಶ್ರಯಕ್ಕಾಗಿ ಆಗಮಿಸಿದ ಹಿಂದೂ, ಸಿಖ್ಖ್, ಬೌಧ್ದರು, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯದವರು ಭಾರತದ ಪೌರತ್ವ ಪಡೆಯಲು ಈ ಕಾಯ್ದೆಯಿಂದ ಅನುಕೂಲವಾಗಲಿದೆ.

Related posts