ಕಾಫಿ, ಅಡಿಕೆ, ಕಾಳುಮೆಣಸು, ತೆಂಗು ಬೆಳೆಗಾರರ ಸಮಸ್ಯೆ ಆಲಿಸಿದಸಚಿವೆ ನಿರ್ಮಲಾ

ಚಿಕ್ಕಮಗಳೂರೂ: ಮಲೆನಾಡು ಭಾಗಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಪ್ರದೇಶಗಳಲ್ಲಿ ಅತಿವೃಷ್ಠಿಯಿಂದಾಗಿ ಕಾಫಿ, ಅಡಿಕೆ, ಕಾಳುಮೆಣಸು, ತೆಂಗು ಸೇರಿದಂತೆ ಹಲವು ಬೆಳೆಗಳು ಹಾನಿಯಾಗಿವೆ. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಆಯೋಜಿಸಿದ್ದ ಕಾಫಿ, ಅಡಿಕೆ, ಕಾಳುಮೆಣಸು, ತೆಂಗು ಬೆಳೆಗಾರರ ಸಮಸ್ಯೆ ಕುರಿತಾದ ಆನ್‌ಲೈನ್ ವಿಡಿಯೋ ಸಂವಾದದಲ್ಲಿ ಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದರು.

ಜಿಲ್ಲೆಯು ಪರಿಸರ ಸೇರಿದಂತೆ ಹಲವು ವೈವಿದ್ಯತೆಯಿಂದ ಕೂಡಿದ್ದು, 2015ರಿಂದ 17ರ ವರೆಗೆ ಮಳೆಯ ಕೊರತೆಯಿಂದಾಗಿ ತೀವ್ರ ಬರಗಾಲದ ಸಮಸ್ಯೆಯಿಂದಾಗಿ ಹಾಗೂ 2018ರಿಂದ 19ರಲ್ಲಿ ಸುರಿದ ಭಾರಿ ಮಳೆಯ ಅತಿವೃಷ್ಠಿಯಿಂದ ಹಾಗೂ ಈ ಬಾರಿ ಕೋವಿಡ್-19 ಕಾರಣದಿಂದ ಕಾಫಿ, ಮೆಣಸು, ಅಡಿಕೆ ಬೆಳಗಾರರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ ಈ ವಿಷಯವಾಗಿ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿ ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದರು.

Related posts