ಕೊರೋನಾ ವೈರಾಣು ಹಾವಳಿ; ಸೋಂಕಿಗೆ ಹುಬ್ಬಳ್ಳಿಯ ಎಎಸ್ಐ ಬಲಿ

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೋನಾ ವೈರಾಣು ಹಾವಳಿ ಮುಂದುವರಿದಿದ್ದು ಅನೇಕರು ಸೋಂಕಿಗೆ ಬಲಿಯಾಗಿದ್ದಾರೆ. ಈ ಪೈಕಿ ಹಲವರು ಪೊಲೀಸರೂ ಸೋಂಕು ತಗುಲಿ ಸಾವನ್ನಪಿರುವ ಪ್ರಕರಣಗಳೂ ವರದಿಯಾಗುತ್ತಿವೆ.

ಈ ನಡುವೆ ಕರ್ತವ್ಯದಲ್ಲಿದ್ದಾಗ ಕೊರೋನಾ ಸೋಂಕು ತಗುಲಿದ್ದ ಧಾರವಾಡ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಎಎಸ್ಐ ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹಾವೇರಿ ಮೂಲದ ಈ ಅಧಿಕಾರಿಗೆ ಜುಲೈ 7ರಂದು ಅವರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದರೂ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Related posts