ಭಾರತದಲ್ಲಿ ಕೊರೋನಾ ತಲ್ಲಣ: 4 ದಿನಗಳಲ್ಲಿ 1.10 ಲಕ್ಷ ಮಂದಿಯಲ್ಲಿ ಸೋಂಕು

ದೆಹಲಿ: ಭಾರತದಲ್ಲಿ ಕೋವಿಡ್-19 ಸೋಂಕಿತರ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದೆ, ಭಾನುವಾರ ಬೆಳಿಗ್ಗೆ ಆರೋಗ್ಯ ಇಲಾಖೆ ನೀಡಿದ ಮಾಹಿತಿಯಂತೆ ಕಳೆದ 24 ತಾಸುಗಳಲ್ಲಿ ವಿವಿಧ ರಾಜ್ಯಗಳಲ್ಲಿ ಸುಮಾರು 38,902 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 10,77,618ಕ್ಕೆ ಏರಿಕೆಯಾಗಿದೆ.

ಗುರುವಾರದಿಂದೀಚೆಗೆ 1,10,040 ಸೋಂಕಿನ ಪ್ರಕರಣಗಳು ದೃಢಪಟ್ಟಿದೆ. ಈ ಅವಧಿಯಲ್ಲಿ ಸುಮಾರು 1913 ಜನರು ಸಾವನ್ನಪ್ಪಿದ್ದಾರೆ ಎಂಬ ಅಂಕಿ ಅಂಶಗಳನ್ನು ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ.

ಮಹಾರಾಷ್ಟ್ರದಲ್ಲಿ 8 ಸಾವಿರಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ. ತಮಿಳುನಾಡಿನಲ್ಲಿ 4807, ಕರ್ನಾಟಕದಲ್ಲಿ 4537 ಮಂದಿಯಲ್ಲಿ ನಿನ್ನೆ ಒಂದೇ ದಿನದಲ್ಲಿ ಸೋಂಕು ದೃಢಪಟ್ಟಿದೆ.

ಆಂಧ್ರಪ್ರದೇಶದಲ್ಲಿ 3963, ಪಶ್ಚಿಮ ಬಂಗಾಳ 2198, ಬಿಹಾರ 1667, ದೆಹಲಿಯಲ್ಲಿ 1475 ಹೊಸ ಕೇಸ್’ಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಮೂಲಗಳು ದೃಢಪಡಿಸಿದೆ.

Related posts