ರಾಜ್ಯದಲ್ಲಿ ಕೊರೋನಾ ಸೋಂಕಿಗೊಳಗಾಗಿ ಸಾವನ್ನಪಿದವರ ಸಂಖ್ಯೆ 3,091ಕ್ಕೆ ಏರಿಕೆ

ಬೆಂಗಳೂರು: ಜಗತ್ತಿನಾದ್ಯಂತ ಸೋಂಕು ವಿಸ್ತರಿಸಿರುವ ಕೊರೋನಾ ವೈರಾಣು ಕರ್ನಾಟಕದಲ್ಲಿ ತಲ್ಲಣ ಸೃಷ್ಟಿಸಿದೆ. ಶನಿವಾರವೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 90 ಕ್ಕೂ ಹೆಚ್ಚು ಮಂದಿ ಕೊರೊನಗೆ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆ ವರೆಗೆ ೯೩ ಮಂದಿ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿಗೊಳಗಾಗಿ ಸಾವನ್ನಪಿದವರ ಸಂಖ್ಯೆ 3,091ಕ್ಕೆ ಏರಿಕೆಯಾಗಿದೆ.

ಈ ನಡುವೆ ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆವರೆಗೆ ರಾಜ್ಯದಲ್ಲಿ 7,178 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಂದೇ ದಿನದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಸೋಂಕು ಪತ್ತೆಯಾಗಿರುವುದು ಇದುವೇ ಮೊದಲು. ಈ ಮಧ್ಯೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,72,102ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 2665 ಮಂದಿ ಕೊರೋನಾ ಸೋಂಕಿಗೊಲ್ಗಾಗಿದ್ದು ಶನಿವಾರ 18 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆಂದು ಆರೋಗ್ಯ ಇಲಾಖೆ ತಿಳಿಸಿದೆ.

Related posts