ಒಂದೇ ದಿನದಲ್ಲಿ 38,902 ಮಂದಿಯಲ್ಲಿ ಸೋಂಕು; 543 ಮಂದಿ ಬಲಿ

ದೆಹಲಿ: ಭಾರತವೂ ಕೊರೋನಾ ಕರಾಳತೆಗೆ ಸಾಕ್ಷಿಯಾಗುತ್ತಿದ್ದು ಸೋಂಕಿನಿಂದಾಗಿ ಸಂಭವಿಸುತ್ತಿರುವ ಮಾರಣ ಹೋಮ ಮುಂದುವರಿದೆ. ಭಾನುವಾರ ಕೂಡ ಕೊರೋನಾ ಕುರಿತ ಆತಂಕದ ಸುದ್ದಿ ಅಪ್ಪಳಿಸಿದೆ.

ಕೋವಿಡ್-19 ಸೋಂಕಿತರ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದೆ, ಭಾನುವಾರ ಬೆಳಿಗ್ಗೆ ಆರೋಗ್ಯ ಇಲಾಖೆ ನೀಡಿದ ಮಾಹಿತಿಯಂತೆ ಸೋಂಕು ಅಷ್ಟೇ ಅಲ್ಲ ಮರಣ ಪ್ರಮಾಣವೂ ಹೆಚ್ಚಿದೆ. ಕಳೆದ 24 ತಾಸುಗಳಲ್ಲಿ ವಿವಿಧ ರಾಜ್ಯಗಳಲ್ಲಿ ಸುಮಾರು 38,902 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 10,77,618ಕ್ಕೆ ಏರಿಕೆಯಾಗಿದೆ.

ಈ ನಡುವೆ ಈ ಅವಧಿಯಲ್ಲಿ ಉಮಾರು 543 ಮಂದಿ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 26,816ಕ್ಕೆ ಏರಿಕೆಯಾಗಿದೆ.

ಇದೇ ವೇಳೆ 10,77,618 ಮಂದಿ ಸೋಂಕಿತರ ಪೈಕಿ 6,77,423 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, 3,73,379 ಮಂದಿ ಇನ್ನೂ ಸೋಂಕಿನಿಂದ ಬಳಲುತ್ತಿದ್ದಾರೆ.

Related posts