ಕೋವಿಡ್‌ನ ದೂರಗಾಮಿ ಪರಿಣಾಮಗಳ ಅಧ್ಯಯನಕ್ಕೆ ತಜ್ಞರ ಸಮಿತಿ : ಸಚಿವ ಸುಧಾಕರ್

ಬೆಂಗಳೂರು: ಕೊರೋನದಿಂದ ಗುಣಮುಖರಾದವರಲ್ಲಿ ಮುಂದೆ ಎದುರಾಗಬಹುದಾದ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಚಿವ ಡಾ.ಕೆ.ಸುಧಾಕರ್, ಕೋವಿಡ್‌ ರೋಗದಿಂದ ಗುಣಮುಖ ಹೊಂದಿದ ನಂತರ ಭವಿಷ್ಯದಲ್ಲಿ ಅದರಿಂದ ಪರಿಣಾಮ ಉಂಟಾಗಬಹುದೇ ಎಂಬ ಅನುಮಾನ ಉದ್ಭವಿಸಿದೆ. ಈ ನಿಟ್ಟಿನಲ್ಲಿ‌ ಅಧ್ಯಯನದ ಅವಶ್ಯಕತೆ ಇದೆ. ಲಘು ಮತ್ತು ತೀವ್ರ ರೋಗಲಕ್ಷಣ ಹೊಂದಿರುವ ಮತ್ತು ಇತರೆ ಗಂಭೀರ ರೋಗಗಳಿಂದ ಬಳಲುತ್ತಿದ್ದವರ ಮೇಲೆ ಆಗಬಹುದಾದ ಪರಿಣಾಮಗಳ ಬಗ್ಗೆ ಅಧ್ಯಯನದಿಂದ ತಿಳಿದುಕೊಳ್ಳಬೇಕಿದೆ ಏನಿದ್ದಾರೆ.

ಈ ಅಧ್ಯಯನದ ಆಧಾರದ ಮೇಲೆ ಕೋವಿಡ್-19 ರೋಗಿಗಳ ದೂರಗಾಮಿ ಆರೋಗ್ಯದ ದೃಷ್ಟಿಯಿಂದ ಸೂಕ್ತ ಚಿಕಿತ್ಸಾ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಟ್ವೀಟ್‌ ನಲ್ಲಿ ಅವರು ಅಭಿಪ್ರಾಯಪಟ್ಟಿದ್ದಾರೆ.

Related posts