ಕೊರೋನಾ ಹಾವಳಿ; ಮತ್ತಷ್ಟು ಸಂಕಟ ಸ್ಥಿತಿಯಲ್ಲಿ ಭಾರತ

ದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲಿದ್ದು ಭಾನುವಾರದ ಬೆಳವಣಿಗೆ ಮತ್ತೆ ಆತಂಕ ಉಂಟುಮಾಡಿದೆ. ಶನಿವಾರ ರಾತ್ರಿ ನಂತರ 24 ಗಂಟೆಗಳಲ್ಲಿ 24 ಸಾವಿರದ 248 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6,97,413ಕ್ಕೆ ಏರಿಕೆಯಾಗಿದೆ.

ಇದೇ ವೇಳೆ ಒಂದೇ ದಿನದಲ್ಲಿ ವಿವಿಧ ರಾಜ್ಯಗಳಲ್ಲಿ 425 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು ಈ ವೈರಾಣು ಹಾವಳಿಗೆ ಬಲಿಯಾದವರ ಸಂಖ್ಯೆ 19 ಸಾವಿರದ 693 ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

ಈ ನಡುವೆ ಕೊರೋನಾ ಸೋಂಕಿನ ವಿಚಾರದಲ್ಲಿ ರಷ್ಯಾವನ್ನು ಹಿಂದಿಕ್ಕಿರುವ ಭಾರತ ಅತೀ ಹೆಚ್ಚು ಸೋಂಕಿತರಿರುವ ದೇಶಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

Related posts