ಕೊರೋನಾ ಹಗರಣ ಆರೋಪದ ಸುಳಿಯಲ್ಲಿ ಬಿಎಸ್‌ವೈ ಸರ್ಕಾರ; ಸಮರಕ್ಕೆ ಸಿದ್ದರಾಮಯ್ಯ ಮುನ್ನುಡಿ

ಬೆಂಗಳೂರು: ಕೊರೋನಾ ಸಂಕಟ ಕಾಲದಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆಯೇ? ಲಾಕ್’ಡೌನ್ ಸಂದರ್ಭದಲ್ಲಿ ಆಹಾರ ಕಿಟ್ ವಿತರಣೆಯಲ್ಲಿ ಅವ್ಯವಹಾರ ನಡೆದಿದೆಯೇ? ಕೊರೊನಾ ನಿಯಂತ್ರಣಕ್ಕಾಗಿ ಸಾಮಗ್ರಿ ಖರೀದಿಯಲ್ಲಿ ಅಕ್ರಮಗಳಾಗಿವೆಯೇ? ಕೋವಿಡ್ ಚಿಕಿತ್ಸೆ ಹಾಗೂ ಕ್ವಾರಂಟೈನ್ ವಿಚಾರದಲ್ಲಿ ಅವ್ಯವಾರ ನಡೆದಿದೆಯೇ?

ಈ ರೀತಿಯ ಕೊರೋನಾ ನಿಯಂತ್ರಣ ಸಂಬಂಧದ ವ್ಯವಹಾರ ಬಗ್ಗೆ ಗಂಭೀರ ಆರೋಪಗಳು ರಾಜ್ಯ ಸರ್ಕಾರದ ವಿರುದ್ಧ ಕೇಳಿಬರುತ್ತಿವೆ. ಈ ಆರೋಪಗಳ ಬಗ್ಗೆ ಕೆಲವು ದಿನಗಳಿಂದ ಹೇಳಿಕೆಗಳ ಮೂಲಕ ತಮ್ಮದೇ ಶಾಲಿಯಲ್ಲಿ ಹೋರಾಟ ನಿರತರಾಗಿರುವ ವಿಧಾಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಇದೀಗ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮತ್ತಷ್ಟು ಸಿಟ್ಟು ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೋನಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಾಡಿರುವ ವೆಚ್ಚಗಳ ಲೆಕ್ಕ ಕೇಳಿದ್ದಾರೆ. ಅವರ ಈ ನಡೆ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಅವರು ಕೇಳಿರುವ ಸಾಲು-ಸಾಲು ಪ್ರಶ್ನೆಗಳು ಹೀಗಿವೆ: 

 • ಕೊರೊನಾ ನಿಯಂತ್ರಣಕ್ಕಾಗಿ ಎಷ್ಟು ಪ್ರಮಾಣದ ಸಾಮಗ್ರಿ ಖರೀದಿಸಲಾಗಿದೆ?
 • ಪ್ರತಿ ಸಾಮಗ್ರಿಯ ಬೆಲೆಯೆಷ್ಟು? ಬಿಡ್/ಕೊಟೇಷನ್ ಮೂಲಕ ಪಾಲ್ಗೊಂಡ ಸಂಸ್ಥೆಗಳು ಯಾವುವು?
 • ಸರಬರಾಜು ಆದೇಶ ಪಡೆದುಕೊಂಡ ಸಂಸ್ಥೆ ಯಾವುದು? ಹೆಚ್ಚುದರ ಕೋಟ್ ಮಾಡಿದ ಕಂಪೆನಿಗೆ ಸರಬರಾಜು ಆದೇಶ ನೀಡಿರುವ ಪ್ರಕರಣಗಳೆಷ್ಟು? ಕಾರಣಗಳೇನು?

 • ಕೊರೊನಾ ನಿಯಂತ್ರಣ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ತಕರಾರುಗಳಿದ್ದರೂ ಪಾವತಿ ಮಾಡಲಾದ ಹಣ ಎಷ್ಟು?
 • ಕೇಂದ್ರ ಸರ್ಕಾರ ಖರೀದಿ ಮಾಡಿದ ಸಾಮಗ್ರಿಗಳು ಯಾವುವು?
 • ಅವುಗಳಲ್ಲಿ ಕಳಪೆಯಾಗಿದೆ ಎಂದು ಬಂದ ದೂರುಗಳೆಷ್ಟು? ಆ ದೂರುಗಳ ಕುರಿತು ಕೈಗೊಂಡಿರುವ ಕ್ರಮಗಳೇನು?
 • ಕೇಂದ್ರ ಮತ್ತು ರಾಜ್ಯ ಸರ್ಕಾರ ಖರೀದಿಸಿದ ಸಾಮಗ್ರಿಗಳನ್ನು ಎಲ್ಲೆಲ್ಲಿ ಮತ್ತು ಎಷ್ಟು ಪ್ರಮಾಣದಲ್ಲಿ ವಿತರಿಸಲಾಗಿದೆ?
 • ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಎಷ್ಟು? ಅದರಲ್ಲಿ ಖರ್ಚು ಮಾಡಲಾದ ಅನುದಾನ ಎಷ್ಟು?
 • ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಅನುದಾನ ಎಷ್ಟು? ಖರ್ಚಾಗಿರುವುದು ಎಷ್ಟು?
 • ಕೊರೊನಾ ನಿಯಂತ್ರಣ ಸಾಮಗ್ರಿ ಸರಬರಾಜು ಆದೇಶ ಪಡೆದ ಕಂಪೆನಿ ಸರಬರಾಜು ಮಾಡಿದ ಉತ್ಪನ್ನಗಳ ಪ್ರಮಾಣ ಎಷ್ಟು?
 • ಗುಣಮಟ್ಟ ಸರಿಇಲ್ಲದ ಕಾರಣಕ್ಕೆ ತಿರಸ್ಕರಿಸಲ್ಪಟ್ಟ ಸಾಮಗ್ರಿಗಳು ಯಾವುವು?
 • ಕಳಪೆ ಸಾಮಗ್ರಿ ಸರಬರಾಜು ಮಾಡಿದ ಕಂಪೆನಿಗಳು ಯಾವುವು? ಕಳಪೆ ಸಾಮಗ್ರಿಗಳ ಪ್ರಮಾಣ ಎಷ್ಟು?

 • ಕೊರೊನಾ ನಿಯಂತ್ರಣಕ್ಕಾಗಿ ಎಸ್‌ಡಿಆರ್‌ಎಫ್ ಮತ್ತು ಎನ್ ಡಿ ಆರ್ ಎಫ್ ಅನುದಾನದಲ್ಲಿ ಜಿಲ್ಲೆಗಳಿಗೆ ಹಂಚಿಕೆ ಮಾಡಿದ ಹಣ ಎಷ್ಟು?
 • ಆ ಅನುದಾನದಲ್ಲಿ ಜಿಲ್ಲಾಡಳಿತಗಳು ಯಾವ ಉದ್ದೇಶಕ್ಕೆ ಎಷ್ಟು ಖರ್ಚು ಮಾಡಿದೆ?
 • ಆಹಾರ,ಆಹಾರ ಧಾನ್ಯಗಳ ಕಿಟ್ ಗಳು, ಹಾಲು ಮುಂತಾದವುಗಳನ್ನು ಎಷ್ಟು ಪ್ರಮಾಣದಲ್ಲಿ ವಿತರಿಸಿದೆ? ಪ್ರ
 • ತಿ ಆಹಾರ ಪ್ಯಾಕೇಟ್/ ಆಹಾರ ಧಾನ್ಯಗಳ ಪ್ಯಾಕೇಟ್ ಕಿಟ್ ಗೆ ನೀಡಿದ ಕನಿಷ್ಠ/ಗರಿಷ್ಠ ದರ ಎಷ್ಟು?
 • ಆಹಾರ ತಯಾರಿಸಿದ ಸಂಸ್ಥೆಗಳು ಯಾವುವು? ಯಾವ ಸಂಸ್ಥೆಗಳಿಗೆ ಎಷ್ಟು ಹಣ ನೀಡಲಾಗಿದೆ?

 • ರಾಜ್ಯದಲ್ಲಿ ಒಟ್ಟು ಎಷ್ಟು ಕ್ವಾರಂಟೈನ್ ಕೇಂದ್ರಗಳನ್ನು ನಿರ್ವಹಿಸಲಾಗುತ್ತಿದೆ?
 • ಪ್ರತಿ ಕ್ವಾರಂಟೈನ್ ಕೇಂದ್ರಕ್ಕೆ ಇಲ್ಲಿಯ ವರೆಗೆ ಖರ್ಚು ಮಾಡಿದ ದುಡ್ಡೆಷ್ಟು?
 • ಯಾವ ಬಾಬತ್ತಿಗೆ ಖರ್ಚು ಮಾಡಲಾಗಿದೆ?
 • ಕ್ವಾರಂಟೈನ್ ಗೊಳಗಾದ ಪ್ರತಿ ವ್ಯಕ್ತಿಗೆ ತಗಲಿರುವ ಖರ್ಚೆಷ್ಟು?

ಇದನ್ನೂ ಓದಿ.. ಕೆಎಸ್‌ಆರ್‌ಟಿಸಿ ನೌಕರರಿಗೆ 1 ವರ್ಷ ವೇತನರಹಿತ ರಜೆ ವಿಚಾರ; ಸರ್ಕಾರಕ್ಕೆ ಪ್ರತಿಪಕ್ಷ ತರಾಟೆ

‘ಪವರ್ ಸ್ಟಾರ್’ ಮುಂದಿನ ಸಿಎಂ..? ರಾಜ್ಯ ರಾಜಕಾರಣದಲ್ಲಿ ‘ಕೈ ಸೂತ್ರ’ದ ಕೌತುಕ

Related posts