ಪರಪ್ಪನ ಅಗ್ರಹಾರ ಜೈಲಿನಲ್ಲೂ ಕೊರೋನಾ ತಾಂಡವ; ಮಂದಿಗೆ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಅತೀ ವೇಗದಲ್ಲಿ ಹರಡುತ್ತಿದ್ದು ಸಿಲಿಕಾನ್ ಸಿಟಿ ಜನರು ಬೆಚ್ಚಿ ಬಿದ್ದಿದ್ದಾರೆ. ಈಗಾಗಲೇ ಕರ್ನಾಟಕ ಪೊಲೀಸ್ ಇಲಾಖೆಯ 500ಕ್ಕೂ ಹೆಚ್ಚು ಮಂದಿ ಸೋಂಕಿಗೊಳಗಾಗಿದ್ದು ಹಲವಾರು ಪೊಲೀಸ್ ಠಾಣೆಗಳು ಸೀಲ್’ಡೌನ್ ಆಗಿದೆ.

ರಾಜ್ಯದಲ್ಲಿ ನಿನ್ನೆ ಬರೋಬ್ಬರಿ 2627 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ರಾಜಧಾನಿ ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ 1525 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಈ ನಡುವೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೂ ಕೊರೋನಾ ತಾಂಡವವಾಡುತ್ತಿದೆ. ಜೈಲಿನ ವಿಶೇಷ ಸೆಲ್ ನಲ್ಲಿ ಕ್ವಾರಂಟೈನ್ ನಲ್ಲಿದ್ದ ಮೂವತ್ತು ಮಂದಿಗೆ ಕೊರೋನಾ ದೃಢಪಟ್ಟಿದೆ. ಸೋಂಕಿತ ಕೈದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Related posts