ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಿದರೆ ಕ್ರಮ; ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇವೆ. ರಾಜ್ಯ ಸರ್ಕಾರ ಗುರುತಿಸಿರುವ ಕೋವಿಡ್ ಆಸ್ಪತ್ರೆಗಳು ಬಹುತೇಕ ಭರ್ತಿಯಾಗಿದ್ದು, ಇದೀಗ ಖಾಸಗಿ ಆಸ್ಪತ್ರೆಗಳ ಪಾತ್ರ ಮಹತ್ವವಾಗಿದೆ.

ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್​ ಸೂಚಿಸಿದ್ದಾರೆ.

ಈ ಕುರಿತಂತೆ ಸರ್ಕಾರದ ಆದೇಶ ಹೊರಡಿಸಿರುವ ಅವರು, ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಚಿಕಿತ್ಸೆ ಮತ್ತು ಪರೀಕ್ಷೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಅನ್ವಯ ಕೇಸ್ ದಾಖಲಿಸಿ ಕ್ರಮ ಜರುಗಿಸುವ ಬಗ್ಗೆ ಅವರು ತಿಳಿಸಿದ್ದಾರೆ.

Related posts