ಕೊರೋನಾ ಸೋಂಕಿತರ ಗುಣಮುಖ ಪ್ರಮಾಣವೂ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಹೆಚ್ಚುತಲಿದ್ದು, ಸೋಂಕಿತರ ಗುಣಮುಖ ಪ್ರಮಾಣವೂ ಹೆಚ್ಚಾಗುತ್ತಿದೆ. ಶೇ 57ರಷ್ಟು ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ 5,66,542 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಶೇಕಡ 2.21 ರಷ್ಟು ಮಂದಿಗೆ ಮಾತ್ರ ಸೋಂಕು ಕಂಡುಬಂದಿದೆ. ರಾಷ್ಟ್ರಮಟ್ಟದಲ್ಲಿ ಶೇಕಡ 3ರಷ್ಟಿರುವ ಮರಣ ಪ್ರಮಾಣ ರಾಜ್ಯದಲ್ಲಿ ಕೇವಲ ಶೇ 1.56ರಷ್ಟಿದೆ ಎಂಬ ಮಾಹಿತಿಯನ್ನು ಟ್ವೀಟ್ ಮೂಲಕ ಅವರು ವಿವರಿಸಿದ್ದಾರೆ.

Related posts