ದೇಶದಲ್ಲಿ ಒಂದೇ ದಿನ 15,968 ಮಂದಿಯಲ್ಲಿ ಸೋಂಕು; 465 ಮಂದಿ ಬಲಿ

ದೆಹಲಿ: ಜಗತ್ತಿನಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಭಾರತದಲ್ಲಂತೂ ಆತಂಕದ ಪರಿಸ್ಥಿತಿಯನ್ನು ತಂದೊಡ್ಡಿದೆ. ಮಂಗಳವಾರ ಒಂದೇ ದಿನ 15,968 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಜೊತೆಗೆ 465 ಮಂದಿ ಸೋಂಕಿತರು ಬಲಿಯಾಗಿದ್ದಾರೆ.

ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 456183ಕ್ಕೆ ಏರಿಕೆಯಾಗಿದೆ . ಸಾವಿನ ಸಂಖ್ಯೆ ಕೂಡ 14476ಕ್ಕೆ ತಲುಪಿದೆ.

ಅದರಲ್ಲೂ ಮಹಾರಾಷ್ಟ್ರದ ಬೆಳವಣಿಗೆ ಆತಂಕ ಉಂಟುಮಾಡಿದೆ. ಮಹಾರಾಷ್ಟ್ರದಲ್ಲಿ ಮಂಗಳವಾರ ಒಂದೇ ದಿನ 3214 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಅಷ್ಟೇ ಅಲ್ಲ 248 ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿರುವ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1,39,010ಕ್ಕೆ ಏರಿಕೆಯಾಗಿದೆ. ಜೊತೆಗೆ ವೈರಸ್ ಗೆ ಬಲಿಯಾದವರ ಸಂಖ್ಯೆ 6531ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.

Related posts