ಕೊರೋನಾ ನಿಯಂತ್ರಣಕ್ಕೆ ಕ್ರಮ, ಆಸ್ಪತ್ರೆಗಳಲ್ಲೂ ಸೂಕ್ತ ವ್ಯವಸ್ಥೆ; ಸರ್ಕಾರದ ಭರವಸೆ 

ಬೆಂಗಳೂರು: ದೇಶಾದ್ಯಂತ ಕೊರೋನಾ ವೈರಾಣು ತಲ್ಲಣ ಸೃಷ್ಟಿಸಿದೆ. ರಾಜ್ಯದಲ್ಲೂ ಕೊರೋನಾ ರಣಕೇಕೆ ಮುಂದುವರಿದಿದ್ದು, ರಾಜಧಾನಿ ಸಹಿತ ಹಲವು ಜಿಲ್ಲೆಗಳಲ್ಲಿ ಟ್ರಾವೆಲ್ ಹಿಸ್ಟರಿ ಗೊತ್ತಾಗದ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಈ ನಡುವೆ ಬೆಂಗಳೂರಿನಲ್ಲಿ ಪರಿಸ್ಥಿತಿ ಎದುರಿಸಲು ಸರ್ಕಾರ ಸಕಲ ರೀತಿಯಲ್ಲೂ ಸಜ್ಜಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೇರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರಲ್ಲಿ ಸೋಂಕು ಕಡಿಮೆ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್ ಮೀಸಲು ಇಡಲು ಸೂಚನೆ ನೀಡಲಾಗುತ್ತದೆ ಎಂದವರು ತಿಳಿಸಿದ್ದಾರೆ.

ರೋಗ ಲಕ್ಷಣಗಳು ಇಲ್ಲದವರ ಕ್ವಾರಂಟೈನ್’ಗಾಗಿ ಕಲ್ಯಾಣ ಮಂಟಪ, ವಸ್ತು ಪ್ರದರ್ಶನ ಕೇಂದ್ರಗಳನ್ನು ಬಳಕೆ ಮಾಡಿಕೊಳ್ಳುತ್ತೇವೆ ಎಂದ ಸಚಿವ ಅಶೋಕ್, ಆಸ್ಪತ್ರೆಗಳಲ್ಲಿ ಬೆಡ್ ಅಲಾಟ್ಮೆಂಟ್ ಬಗ್ಗೆ ಉಸ್ತುವಾರಿಗೆ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

Related posts