ಭಾರತದಲ್ಲಿ ಕೊರೋನಾ ಸೋಂಕಿನ ಪ್ರಮಾಣ 4 ದಿನಗಳಲ್ಲಿ 6 ಲಕ್ಷದಿಂದ 7 ಲಕ್ಷಕ್ಕೆ ಏರಿಕೆ

ದೆಹಲಿ: ಜಗತ್ತಿನಾದ್ಯಂತ ಆತಂಕದ ಛಾಯೆ ಆವರಿಸುವಂತೆ ಮಾಡಿರುವ ಕೊರೋನಾ ವೈರಾಣು ಭಾರತದಲ್ಲಿ ಆರ್ಭಟ ಮುಂದುವರಿಸಿದೆ. ಸೋಮವಾರ ಒಂದೇ ದಿನ 22,252 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು ಭಾರತದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ದಾಟಿದೆ.

ಈ ಬಗ್ಗೆ ಅಂಕಿ ಅಂಶ ಬಿಡುಗಡೆ ಮಾಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ದೇಶದಲ್ಲಿ ಕೊರೋನಾ ಕಾರಣಕ್ಕಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ದಿನೇದಿನೇ ಹೆಚ್ಚುತ್ತಿದೆ. ಸೋಂಕಿನ ಪ್ರಮಾಣ ಕೇವಲ 4 ದಿನಗಳಲ್ಲಿ 6 ಲಕ್ಷದಿಂದ 7 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಎಂದು ಕಳವಳ ವ್ಯಕ್ತಪಡಿಸಿದೆ.

ಇಂದು ಬೆಳಗ್ಗಿನ ವರದಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 467 ಮಂದಿ ಬಲಿಯಾಗಿದ್ದು, ಇದರೊಂದಿಗೆ ಕೊರೋನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 20,160ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

Related posts