ಬೆಂಗಳೂರು: ಜಗತ್ತಿನಾದ್ಯಂತ ಕೊರೋನಾ ಆತಂಕದ ಪರಿಸ್ಥಿತಿಯನ್ನು ತಂದೊಡ್ಡಿದೆ. ಭಾರತ ಇದೀಗ ಸೋಂಕಿತ ರಾಷ್ಟ್ರಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದರೆ, ಇತ್ತ ರಾಜ್ಯದಲ್ಲೂ ಸೋಂಕು ತೀವ್ರಗತಿಯಲ್ಲಿ ಹರಡಿದೆ.
ಇದೇ ಸಂದರ್ಭದಲ್ಲಿ, ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಕುಟುಂಬ ಸದಸ್ಯರಿರೂ ಸೋಂಕು ಅಂಟಿಕೊಂಡಿದೆ.
ಸಚಿವರ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಪರೀಕ್ಷೆಗೊಳಪಡಿಸಿದಾಗ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರಷ್ಟೇ ಅಲ್ಲ ಸಚಿವ ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಸ್ವತಃ ಸಚಿವರೇ ಟ್ವೀಟ್ ಮಾಡಿದ್ದಾರೆ.
ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ.
— Dr Sudhakar K (@mla_sudhakar) June 23, 2020