ನಿಲ್ಲದ ಕೊರೋನಾ ಹಾವಳಿ; ದೇಶದಲ್ಲಿ ಒಂದೇ ದಿನ 26,506 ಮಂದಿಯಲ್ಲಿ ಸೋಂಕು

ದೆಹಲಿ: ಭಾರತ ಕೊರೋನಾ ಕಂಟಕದಿಂದ ಪಾರಾಗಲಿದೆಯೇ ಎಂಬ ಸಂಶಯ ಉಂಟಾಗಿದೆ. ಈಗಾಗಲೇ ಅತೀ ಹೆಚ್ಚು ಕೊರೋನಾ ಸೋಂಕಿತರಿರುವ ರಾಷ್ಟ್ರಗಳ ಪೈಕಿ ಮೂರನೇ ಸ್ಥಾನದಲ್ಲಿರುವ ಭಾರತದಲ್ಲಿ ಡೈನ್ ಡೈನ್ ಸೋಂಕು ಉಲ್ಬಣಗೊಳ್ಳುತ್ತಿದೆ.

ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಗುರುವಾರ ಮತ್ತೊಮ್ಮೆ ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಆರೋಗ್ಯ ಸಚಿವಾಲಯದ ಮಾಹಿತಿಯಂತೆ ನಿನ್ನೆ ಒಂದೇ ದಿನ 26,506 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಭಾರತದಲ್ಲಿ ಕೋವಿಡ್ ೧೯ ಸೋಂಕಿತರ ಸಂಖ್ಯೆ 7,93,802ಕ್ಕೆ ಏರಿಕೆಯಾಗಿದೆ.

ಈ ನಡುವೆ ಕೊರೋನಾ ಸೋಂಕಿಗೊಳಗಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿವೆ. ವಿವಿಧ ರಾಜ್ಯಗಳಲ್ಲಿ ನಿನ್ನೆ ಒಂದೇ ದಿನ 475 ಮಂದಿ ಬಲಿಯಾಗಿದ್ದು ಕೊರೋನಾದಿಂದಾಗಿ ಭಾರತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಾವಿನ ಸಂಖ್ಯೆ 21,604ಕ್ಕೆ ತಲುಪಿದೆ.

Related posts