ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 5,85,493ಕ್ಕೆ ಏರಿಕೆ

ದೆಹಲಿ: ಜಗತ್ತಿನಾದ್ಯಂತ ಕೊರೋನಾ ಮರಣ ಮೃದಂಗ ಭಾರಿಸುತ್ತಿದ್ದು, ಭಾರತವೂ ಈ ವೈರಾಣು ಹಾವಳಿಯಿಂದ ತತ್ತರಿಸಿದೆ. ಸೋಮವಾರ ಸಂಜೆಯಿಂದ ಮಂಗಳವಾರ ನಡುವೆ 24 ಗಂಟೆಗಳಲ್ಲಿ 18,653 ಮಂದಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ.

ಈ ಕುರಿತಂತೆ ಮಾಹಿತಿ ಬಹಿರಂಗಪಡಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾರತದಲ್ಲಿ ಕೋವಿಡ್ – ೧೯ ಸೋಂಕಿತರ ಸಂಖ್ಯೆ 5,85,493ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ಮಂಗಳವಾರ ಒಂದೇ ದಿನ ಮಹಾಮಾರಿ ವೈರಸ್ ಸೋಂಕಿಗೆ 507 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ವೈರಸ್’ನಿಂದ ಸಾವನ್ನಪ್ಪಿದವರ ಸಂಖ್ಯೆ 17,400ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಒಂದು ಸಮಾಧಾನಕರ ಸಂಗತಿಯೆಂದರೆ 3,47,979 ಮಂದಿ ಸೂಕ್ತ ಚಿಕಿತ್ಸೆ ಪಡೆದು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related posts