ಕೋವಿಡ್ ಕರ್ತವ್ಯದಲ್ಲಿದ್ದ ಕೆಎಎಸ್ ಅಧಿಕಾರಿ ಹೃದಯಾಘಾತದಿಂದ ಸಾವು

ಬೆಂಗಳೂರು, : ಕೋವಿಡ್ 19 ಕರ್ತವ್ಯದಲ್ಲಿದ್ದ ಕೆಎಎಸ್ ಅಧಿಕಾರಿ ಹೆಚ್.ಗಂಗಾಧರಯ್ಯ ಹೃದಯಾಘಾತದಿಂದ ಮೃತಪಟ್ಟಿದ್ದು ಅವರ ನಿಧಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನೋಡೆಲ್ ಅಧಿಕಾರಿಯಾಗಿ ಕೋವಿಡ್ 19 ಕರ್ತವ್ಯದಲ್ಲಿದ್ದ ಹೆಚ್.ಗಂಗಾಧರಯ್ಯ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಬಗ್ಗೆ ಅತೀವ ನೋವು ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ. ಜೊತೆಗೆ ಗಂಗಾಧರಯ್ಯ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡುವುದಾಗಿ ಭರವಸೆ ನೀಡಿದ್ದಾರೆ.

Related posts