ಹೆಚ್ಚಿನ ಕೋವಿಡ್ ಪರೀಕ್ಷೆ ನಡೆಸಿ : ಅಧಿಕಾರಿಗಳಿಗೆ ಡಿಸಿಎಂ ಸೂಚನೆ

ಬೆಂಗಳೂರು: ರಾಮನಗರ ಜಿಲ್ಲೆಗೆ ನಿಗದಿಯಾಗಿರುವ ಗುರಿಗೆ ಮಾತ್ರ ಕೋವಿಡ್ ಪರೀಕ್ಷೆಗೆ ಸೀಮಿತಗೊಳಿಸದೆ ಅವಶ್ಯಕತೆ ಇರುವ ಕಡೆ ಹೆಚ್ಚಿನ ಕೋವಿಡ್-19 ಪರೀಕ್ಷೆ ನಡೆಸುವಂತೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಸಿ.ಎನ್ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ರಾಮನಗರ ಜಿಲ್ಲೆಯಲ್ಲಿ ಐ.ಎಲ್.ಐ ಹಾಗೂ ಎಸ್.ಎ.ಆರ್.ಐ ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಿ. ಜಿಲ್ಲೆಯಲ್ಲಿ ಮಧುಮೇಹ, ರಕ್ತದ ಒತ್ತಡ ಸೇರಿದಂತೆ ಇತರೆ ಕಾಯಿಲೆಯಿಂದ ಬಳಲುತ್ತಿರುವವರ ಬಗ್ಗೆ ಹೆಚ್ಚಿನ ನಿಗಾವಹಿಸಿ ಪ್ರಾಥಮಿಕ ಹಂತದಲ್ಲೇ ಕೋವಿಡ್ ಕಾಯಿಲೆಯನ್ನು ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸಿ ಎಂದರು.

ಆರೋಗ್ಯ ಇಲಾಖೆಯಲ್ಲಿ ನರ್ಸ್ ಗಳ ಕೊರತೆ ಇದ್ದರೆ ಬೇರೆ ಸ್ಥಳದಿಂದ 15 ಮಂದಿ ನರ್ಸ್ ಗಳ ವ್ಯವಸ್ಥೆ ಮಾಡಲಾಗುವುದು. ಅವರಿಗೆ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಆರೋಗ್ಯ ಇಲಾಖೆಯಿಂದ ಕಲ್ಪಿಸಿಕೊಡಬೇಕು ಎಂದವರು ಸೂಚಿಸಿದರು.

Related posts