ತಂತ್ರಜ್ಞಾನ ಆಧಾರಿತ ಕೃಷಿ; ರೈತರಿಗೆ ಡಿಸಿಎಂ ಸಲಹೆ

ದಾವಣಗೆರೆ: ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ವ್ಯವಸಾಯ ಮಾಡಿದರೆ ಅತ್ಯುತ್ತಮ ಲಾಭ ಗಳಿಸಬಹುದು. ಈ ನಿಟ್ಟಿನಲ್ಲಿ ರೈತರು ಯೋಚನೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸಲಹೆ ಮಾಡಿದ್ದಾರೆ.

ಹೊನ್ನಾಳಿ ವಿಧಾನಸಭೆ ಕ್ಷೇತ್ರದಲ್ಲಿ ಉಪ ಮುಖ್ಯಮುಂತ್ರಿ ಗೋವಿಂದ ಕಾರಜೋಳ ಅವರ ಜತೆಗೂಡಿ ವಿವಿಧ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ ಅಶ್ವತ್ಥನಾರಾಯಣ, ಎಲ್ಲರಿಗೂ ಗೊತ್ತಿರುವಂತೆ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ತಂತ್ರಜ್ಞಾನ ಆಭಿವೃದ್ಧಿಯಾಗುತ್ತಿದೆ. ಈ ತಂತ್ರಜ್ಞಾನವನ್ನು ಕೃಷಿ ಉತ್ಪಾದನೆಗೆ ಅನ್ವಯ ಮಾಡಿಕೊಂಡರೆ ಉತ್ತಮ ಲಾಭ ಗಳಿಸಲು ಸಾಧ್ಯವಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಅಭಿವೃದ್ಧಿಯ ವೇಗ ಹೆಚ್ಚಾಗಿದ್ದು, ಹೊನ್ನಾಳಿ ಕ್ಷೇತ್ರದಲ್ಲಿಯೇ ಅದನ್ನು ಗಮನಿಸಬಹುದು ಎಂದ ಅವರು, ಇನ್ನು ಮುಂದೆ ಯಾವುದೇ ಯೋಜನೆ ತೆವಳುತ್ತಾ ಸಾಗುವುದಿಲ್ಲ. ಕಾಲಮಿತಿಯೊಳಗೆ ಎಲ್ಲವೂ ಕಾರ್ಯಗತವಾಗುತ್ತವೆ ಎಂದರು.

Related posts