ಹೊನ್ನಾಳಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ; ಪಂಚಾಯತ್ ಸಮರ ವಿಜೇತರಿಗೆ ಸನ್ಮಾನ

ದಾವಣಗೆರೆ: ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಗೆದ್ದ ಭಾರತೀಯ ಜನತಾ ಪಕ್ಷ ಬೆಂಬಲಿಗರು ಗೆದ್ದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಯಿತು. ಬೃಹತ್ ಸಮಾವೇಶದಲ್ಲಿ ಪಂಚಾಯತ್ ನೂತನ ಸದಸ್ಯರನ್ನು ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದವರನ್ನು ಅಭಿನಂದಿಸಲಾಯಿತು.

ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಹಿತ ಅನೇಕ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Related posts