ಕೃಷಿ ಕಾಯ್ದೆ; ಪ್ರಧಾನಿ ಮೋದಿಗೆ ಸೋನಿಯಾ ಪಾಠ

ದೆಹಲಿ: ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಕಾಯ್ದೆ ವಿರೋಧಿಸಿ ರೈತರ ಹೋರಾಟ ೪೦ ದಿನಕ್ಕೆ ಕಾಲಿಡುತ್ತಿದ್ದಂತೆಯೇ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧೀ ಮತ್ತೊಮ್ಮೆ ಘರ್ಜಿಸಿದ್ದಾರೆ. ಅಹಂಕಾರ ಬದಿಗಿಟ್ಟು ಕೂಡಲೇ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ರೈತರು ಸುದೀರ್ಘ ಹೋರಾಟ ನಡೆಸುತ್ತಿದ್ದರೂ ಸರ್ಕಾರ ವಿವಾದ ಬಗೆಹರಿಸದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಸ್ವಾತಾಂತ್ರ್ಯೋತ್ತರದ ದಿನಗಳಲ್ಲಿ ಇಂತಹ ಅಹಂಕಾರಿ ಸರ್ಕಾರವನ್ನು ತಾವು ಇದೇ ಮೊದಲು ನೋಡುತ್ತಿರುವುದಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ಸೋನಿಯಾ ಗಾಂಧಿ, ಸಾರ್ವಜನಿಕರ ಭಾವನೆಗಳನ್ನು ನಿರ್ಲಕ್ಷಿಸಿ ಹೆಚ್ಚು ದಿನ ಸರ್ಕಾರ ನಡೆಸಲಾಗದು ಎಂದು ಮೋದಿ ಸರ್ಕಾರವನ್ನು ಕುಟುಕಿದ್ದಾರೆ.

ಈಗಲೂ ಕಾಲ ಮಿಂಚಿಲ್ಲ, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಹಂಕಾರವನ್ನು ಬದಿಗಿರಿಸಿ ತಕ್ಷಣವೇ ಬೇಷರತ್ತಾಗಿ ಕೃಷಿ ಕಾನೂನುಗಳನ್ನು ಹಿಂಪಡೆಯಿರಿ ಎಂದಿರುವ ಸೋನಿಯಾ, ಈ ಮೂಲಕ ಜೀವ ಕಳೆದುಕೊಂಡಿರುವ ರೈತರಿಗೆ ಗೌರವ ಸಲ್ಲಿಸಿ ಎಂದು ಸಲಹೆ ಮಾಡಿದ್ದಾರೆ

Related posts