ಜ.26ರಂದು ದೆಹಲಿಯಲ್ಲಿ ರೈತರಿಂದ ಟ್ರಾಕ್ಟರ್ ಪೆರೇಡ್; ಅನುಮತಿ ನೀಡುತ್ತಾ ಸರ್ಕಾರ?

ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ರೈತರು ಜನವರಿ 26ರಂದು ನಡೆಸಲುದ್ದೇಶಿಸಿರುವ ಟ್ರ್ಯಾಕ್ಟರ್ ಪರೇಡ್‌ಗೆ ಸರ್ಕಾರ ಅನುಮತಿ ನೀಡಿಲ್ಲ. ಅನುಮತಿ ನೀಡುವ ಕುರಿತುಪರಿಶೀಲನೆ ನಡೆಯುತ್ತಿವೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಕೃಷಿ ಕಾನೂನು ಮತ್ತು ಶಾಸನಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ನವೆಂಬರ್ 28ರಿಂದ, ಪಂಜಾಬ್ ಮತ್ತು ಹರಿಯಾಣದ ರೈತರು, ಸಿಂಗು, ಟಿಕ್ರಿ ಮತ್ತು ಗಾಜಿಪುರ ಸೇರಿದಂತೆ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 26ರಂದು ಎರಡು ಲಕ್ಷಕ್ಕೂ ಹೆಚ್ಚು ಟ್ರಾಕ್ಟರುಗಳ ಮೂಲಕ ರಾಜಧಾನಿಯಲ್ಲಿ ಪೆರೇಡ್ ನಡೆಸುವುದಾಗಿಯೂ ವಿವಿಧ ಸಂಘಟನೆಗಳು ಘೋಷಿಸಿವೆ.

ಈ ಟ್ರ್ಯಾಕ್ಟರ್ ಪರೇಡ್‌ಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ರೈತ ನಾಯಕ ಅಭಿಮನ್ಯು ಕೋಹರ್ ಹೇಳಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ದೆಹಲಿ ಪೊಲೀಸರು, ಈ ವರೆಗೂ ಪೆರೇಡ್’ಗೆ ಅನುಮತಿ ನೀಡಿಲ್ಲ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

 

Related posts