ಧಾರವಾಡದಲ್ಲಿ ತ್ಯಾಜ್ಯ ಸಂಸ್ಕರಣ ಘಟಕ ಲೋಕಾರ್ಪಣೆ

ಭಾರತ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಯೋಜನೆ ಅನುದಾನ, ಕರ್ನಾಟಕ ರಾಜ್ಯ ಸರ್ಕಾರದ ಅನುದಾನದ ಅಡಿಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾದ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣ ಘಟಕ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಧಾರವಾಡ ಕೇಂದ್ರ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಕಟ್ಟಡದ ಉದ್ಘಾಟನೆಯನ್ನು ಮಾನ್ಯ ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್ ಜೋಶಿ ಉದ್ಘಾಟಿಸಿದರು.

ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ ಉಪಸ್ಥಿತಿಯಲ್ಲಿ ಉದ್ಘಾಟನೆ ನೆರವೇರಿತು.

ವಿಧಾನಸಭಾ ಸದಸ್ಯರಾದ ಅರವಿಂದ ಚಂದ್ರಕಾಂತ ಬೆಲ್ಲದ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಮೋಹನ್ ಲಿಂಬಿಕಾಯಿ ಸೇರಿದಂತೆ ಜಿಲ್ಲೆಯ ಹಲವು ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts