ಧರ್ಮೇಗೌಡ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ಬೆಂಗಳೂರು: ವಿಧಾನಪರಿಷತ್ತಿನ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನ ಅತ್ಯಂತ ದುರದೃಷ್ಟಕರ ಹಾಗೂ ತೀವ್ರ ಆಘಾತ ತಂದಿದೆ. ವಿಧಾನ ಪರಿಷತ್ ಸದಸ್ಯರಾಗಿ, ಉಪ ಸಭಾಪತಿಯಾಗಿ ಅವರ ಕಾರ್ಯ ವೈಖರಿ ಅತ್ಯುತ್ತಮವಾಗಿತ್ತು ಎಂದು ಸಿಎಂ ಸ್ಮರಿಸಿಕೊಂಡಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ಆಘಾತವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಸಿಎಂ ಪ್ರಾರ್ಥಿಸಿದ್ದಾರೆ.

Related posts