ಉಪಸಭಾಪತಿ ಧರ್ಮೇಗೌಡರ ಆತ್ಮಹತ್ಯೆಗೆ ಇದುವೇ ಕಾರಣ?

ಬೆಂಗಳೂರು: ಜೆಡಿಎಸ್ ಮುಖಂಡ, ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ಸಾವಿನ ಸುತ್ತ ಸಹಜವೆಂಬಂತೆಯೇ ಅನುಮಾನಗಳು ಹುಟ್ಟಿಕೊಂಡಿದೆ.

ಕಡೂರು ಸಮೀಪ ರೈಲು ಹಳಿಯ ಪಕ್ಕದಲ್ಲೇ ಅವರ ಮೃತದೇಹ ಪತ್ತೆಯಾಗಿದೆ. ರುಂಡ ಮುಂದ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದೇ ಹೇಳಲಾಗುತ್ತಿದೆ. ಆದರೆ ಈ ಸಾವು ನ್ಯಾಯವೇ? ಈ ಸಾವಿಗೆ ಕಾರಣವಾದರೂ ಏನು? ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಎಸ್.ಎಲ್. ಧರ್ಮೇಗೌಡ ಅವರು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸದೃಢ ಕುಟುಂಬದ ಹಿನ್ನೆಲೆಯವರು. ಆದರೆ ಇತ್ತೀಚೆಗೆ ವಿಧಾನಪರಿಷತ್​ನಲ್ಲಿ ಸಭಾಪತಿ ಪೀಠದ ಮೇಲೆ ಕುಳಿತಿದ್ದ ಅವರನ್ನ ಕಾಂಗ್ರೆಸ್ ಸದಸ್ಯರು ಎಳೆದಾಡಿದ್ದರು. ಆ ದಿನದ ಗಲಾಟೆಯ ಘಟನೆ ಧರ್ಮೇಗೌಡ ಅವರ ಮನಸಿಗೆ ತುಂಬಾ ನೋವು ತಂದಿತ್ತು. ಈ ನೋವಿನ ಅಕ್ಷರಗಳು ಡೆತ್ ನೋಟ್​ನಲ್ಲಿ ಇದೆ ಎನ್ನಲಾಗಿದೆ.

ಸೋಮವಾರ ಸಂಜೆ 6:30ಕ್ಕೆ ಸಖರಾಯಪಟ್ಟಣದಿಂದ ಖಾಸಗಿ ಡ್ರೈವರ್ ಜೊತೆ ಕಾರಿನಲ್ಲಿ ಹೊರಟ ಎಸ್.ಎಲ್. ಧರ್ಮೇಗೌಡ ಅವರು ಕಡೂರು ಸಮೀಪದ ಗುಣಸಾಗರ ಬಳಿ ಕಾರಿನಿಂದ ಇಳಿದು ಒಬ್ಬ ವ್ಯಕ್ತಿ ಜೊತೆ ಸ್ವಲ್ಪ ಕೆಲಸ ಇದೆ ಎಂದು ಹೇಳಿ ಹೋದರೆನ್ನಲಾಗಿದೆ. ನಂತರ ಕಡೂರಿನ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಶತಾಬ್ದಿ ಎಕ್ಸ್​ಪ್ರೆಸ್ ಬರುವ ಸಮಯ ವಿಚಾರಿಸಿದರೆನ್ನಲಾಗಿದೆ. ಅದಾದ ಸ್ವಲ್ಪ ಹೊತ್ತಿನಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ.

 

Related posts