ಉಪಸಭಾಪತಿ ಎಸ್​.ಎಲ್​.ಧರ್ಮೇಗೌಡ ನಿಧನಕ್ಕೆ ಎಚ್​.ಡಿ.ದೇವೇಗೌಡ ಕಂಬನಿ

ಬೆಂಗಳೂರು: ಜೆಡಿಎಸ್ ಮುಖಂಡ, ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ನಿಧಾನ ಜೆಡಿಎಸ್ ಕಾರ್ಯಕರ್ತರಿಗೆ ಅತೀವ ನೋವು ತಂದಿದೆ. ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಪಕ್ಷದ ಮುಖಂಡರು ಕಂಬನಿ ಮಿಡಿದಿದ್ದಾರೆ.
ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರು ಉಪಸಭಾಪತಿ ನಿಧನ ಬಗ್ಗೆ ಟ್ವೀಟ್ ಮಾಡುವ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ಆಘಾತ ತಂದಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯಕ್ಕೆ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ.

Related posts