ಉಪಸಭಾಪತಿ ಧರ್ಮೇಗೌಡರ ನಿಧನಕ್ಕೆ ಶರವಣ ಸಂತಾಪ

ಬೆಂಗಳೂರು: ವಿಧಾನಪರಿಷತ್ತಿನ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ನಿಧನಕ್ಕೆ ಮಾಜಿ ಶಾಸಕ, ಜೆಡಿಎಸ್ ನಾಯಕ ಟಿ.ಎ.ಶರವಣ ಸಂತಾಪ ಸೂಚಿಸಿದ್ದಾರೆ.

ವಿಧಾನಪರಿಷತ್ ಉಪಸಭಾಪತಿ, ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ ಎಂದು ಟಿ.ಎ.ಶರವಣ ಟ್ವೀಟ್ ಮಾಡಿ ನೋವು ಹಂಚಿಕೊಂಡಿದ್ದಾರೆ.

ಅವರ ಜೊತೆ ಎರಡು ವರ್ಷ ವಿಧಾನಪರಿಷತ್ತಿನಲ್ಲಿ ಕೆಲಸ ಮಾಡಿರುವೆ, ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ ಎಂದಿರುವ ಟಿ.ಎ.ಶರವಣ, ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

Related posts