ಅಂತಾರಾಷ್ಟ್ರೀಯ ಕ್ರಿಕೆಟ್ ಎಂಎಸ್ ಧೋನಿ ವಿದಾಯ; ಐಪಿಎಲ್ ನಲ್ಲಿ ಮಾತ್ರ ಆಟ

ದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಎಂಎಸ್ ಧೋನಿ ಅವರು ಐಪಿಎಲ್ ನಲ್ಲಿ ಮಾತ್ರ ಆಡಲಿದ್ದಾರೆ. ಈ ಹಿಂದೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದ ಧೋನಿ ಟಿ -20, ಏಕದಿನ ತಂಡಗಳಲ್ಲಿ ಆಡುತ್ತಿದ್ದರು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್’ ಗೂ ಅವರು ನಿವೃತ್ತಿ ಪ್ರಕಟಿಸಿ ಅವರು ಇಡೀ ಕ್ರೀಡಾ ಜಗತ್ತನ್ನು ಅಚ್ಚರಿಗೊಳಿಸಿದ್ದಾರೆ.

ಈ ಕುರಿತಂತೆ ಅವರು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ವರೆಗೂ ತಮಗೆ ಬೆಂಬಲ ನೀಡಿದ ಅಭಿಮಾನಿಗಳು, ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ಧನ್ಯವಾದ ಸಲ್ಲಿಸಿದ್ದಾರೆ.

Related posts