ಡಿಜೆ ಹಳ್ಳಿ ಬೆಂಕಿ ಗಲಭೆ; ಮತ್ತೊಬ್ಬ ಕೈ ನಾಯಕ ಜಾಕೀರ್ ಬಂಧನ

ಬೆಂಗಳೂರು: ಡಿಜೆ ಹಳ್ಳಿ ಬೆಂಕಿ ಗಲಭೆ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ರಾಕಿಬ್ ಜಾಕೀರ್’ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕೆಲ ದಿನಗಳ ಹಿಂದಷ್ಟೇ ಬಂಧಿಸಿದ್ದ ಸಿಸಿಬಿ ಪೊಲೀಸರು ಕಾಂಗ್ರೆಸ್ ನಾಯಕಜಾಕೀರ್’ಗಾಗಿ ಹುಡುಕಾಟದಲ್ಲಿ ತೊಡಗಿದ್ದರು.

ಪುಲಕೇಶಿನಗರ ವಾರ್ಡ್’ನ ಮಾಜಿ ಕಾರ್ಪೊರೇಟರ್ ರಾಕಿಬ್ ಜಾಕೀರ್’ಗೆ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದರು. ಒಮ್ಮೆ ವಿಚಾರಣೆಗೆ ಹಾಜರಾಗಿದ್ದ ಜಾಕೀರ್ ಬಳಿಕ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ. ಹಲವು ದಿನಗಳಿಂದ ಹುಡುಕಾಟದಲ್ಲಿದ್ದ ತಂಡ ಜಾಕೀರ್ ಬಗ್ಗೆ ಸುಳಿವು ಪಡೆದು ನಿನ್ನೆ ತಡರಾತ್ರಿ ವಿಶೇಷ ಬಂಧಿಸಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Related posts