ಅಹಮದ್ ಪಟೇಲ್ಸಂಸ್ಕಾರದಲ್ಲಿ ಡಿ.ಕೆ.ಶಿ, ಯು.ಟಿ.ಖಾದರ್ ಭಾಗಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುಜರಾತ್ ನ ಭರೂಚ ಜಿಲ್ಲೆಯ ಪಿರಮಾಣ್ ಗ್ರಾಮದಲ್ಲಿ ಹಿರಿಯ ಕಾಂಗ್ರೆಸ್ ಮಖಂಡ ದಿವಂಗತ ಅಹಮದ್ ಪಟೇಲ್ ಅವರ ಪಾರ್ಥೀವ ಶರೀರದ ಮೆರವಣಿಗೆ ಹಾಗೂ ಅಂತಿಮ ಸಂಸ್ಕಾರದಲ್ಲಿ ಗುರುವಾರ ಪಾಲ್ಗೊಂಡರು.

ಇದಕ್ಕೂ ಮೊದಲು ಅಹಮದ್ ಪಟೇಲ್ ಅವರ ನಿವಾಸಕ್ಕೆ ಭೇಟಿ ನೀಡಿ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಎಐಸಿಸಿ ಮುಖಂಡ ರಾಹುಲ್ ಗಾಂಧಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಯು.ಟಿ. ಖಾದರ್ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.

Related posts