ಸರ್ಕಾರ ರಾಜೀನಾಮೆ ನೀಡಲಿ, ರಾಜ್ಯಪಾಲರ ಆಳ್ವಿಕೆ ಜಾರಿಗೆ ಬರಲಿ; ಡಿ.ಕೆ.ಶಿ. ಒತ್ತಾಯ

ಬೆಂಗಳೂರು: ಕೊರೋನಾ ವಿಚಾರದಲ್ಲಿ ರಾಜ್ಯವನ್ನು ದೇವರೇ ಕಾಪಾಡಬೇಕು ಎಂದು ಆರೋಗ್ಯ ಸಚಿವರು ನೀಡಿದ್ದಾರೆನ್ನಲಾದ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಹೇಳಿಕೆಯನ್ನು ಮುಂದಿಟ್ಟು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ಪ್ರತಿಪಕ್ಷದ ನಾಯಕರು ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.

ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೊರೋನಾ ಸೋಂಕಿನ ಪರಿಸ್ಥಿತಿಯನ್ನು ನಿರ್ವಹಿಸಲು ಸಾಧ್ಯವಿಲ್ಲ, ದೇವರೇ ನಮ್ಮನ್ನು ಕಾಪಾಡಬೇಕು ಎಂದು ಒಪ್ಪಿಕೊಳ್ಳುವವರು ಅಧಿಕಾರದಲ್ಲಿ ಯಾಕಿರಬೇಕು? ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ವ್ಯಂಗ್ಯವಾಡಿದ್ದಾರೆ. ಅವರು ಒಂದು ಕ್ಷಣವೂ ವೇಸ್ಟ್ ಮಾಡದೆ ರಾಜೀನಾಮೆ ನೀಡಲಿ, ರಾಜ್ಯಪಾಲರ ಆಳ್ವಿಕೆ ಜಾರಿಗೆ ಬರಲಿ ಎಂದು ಡಿ.ಕೆ. ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

Related posts