ಗುತ್ತಿಗೆ ವೈದ್ಯರನ್ನು ಖಾಯಂಗೊಳಿಸಲು ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಕೊರೋನಾ ಸಂಕಟ ಕಾಲದಲ್ಲಿ ಸೇವಾ ಖಾಯಮಾತಿಗಾಗಿ ಒತ್ತಾಯಿಸುತ್ತಿರುವ ಗುತ್ತಿಗೆ ವೈದ್ಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗುತ್ತಿಗೆ ವೈದ್ಯರನ್ನು ಖಾಯಂಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬೆಂಗಳೂರಿನಲ್ಲಿಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ವೈದ್ಯರ ಬೇಡಿಕೆ ಬಗ್ಗೆ ಚರ್ಚಿಸಲಾಯಿತು. ಗುತ್ತಿಗೆ ವೈದ್ಯರ ಬೇಡಿಕೆಗೆ ಸ್ಪಂದಿಸಲು ತೀರ್ಮಾನಿಸಿದ ಮಂತ್ರಿಮಂಡಲ, ಖಾಯಂಗೊಳಿಸುವ ವೇಳೆ ವೈದ್ಯರು ಸಲ್ಲಿಸಿರುವ ಸೇವಾ ಅವಧಿಯನ್ನು ಪರಿಗಣನೆ ಮಾಡಬೇಕೆಂಬ ನಿರ್ಧಾರಕ್ಕೂ ಬರಲಾಯಿತು.

ಸಂಪುಟ ಸಭೆಯ ನಿರ್ಧಾರ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಪ್ರತಿ ಆರು ತಿಂಗಳು ಸೇವಾ ಅವಧಿಗೆ 2.5 ಗ್ರೇಸ್ ಮಾರ್ಕ್ ನೀಡಲು ನಿರ್ಧರಿಸಲಾಗಿದೆ. ಗರಿಷ್ಠ 30 ಅಂಕಗಳನ್ನು ನೀಡಲಾಗುವುದು ಎಂದು ತಿಳಿಸಿದರು.

Related posts