ಕೊರೋನಾ ಸಂದರ್ಭದಲ್ಲೇ ವೈದ್ಯರ ಪ್ರತಿಭಟನೆ; ಸಮಸ್ಯೆ ಬಗೆಹರಿಸಲು ಸರ್ಕಾರ ಹರಸಾಹಸ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಉಲ್ಬಣಗೊಂಡಿರುವಾಗಲೇ ಗುತ್ತಿಗೆ ವೈದ್ಯರ ಪ್ರತಿಭಟನೆ ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.

ಸಮಸ್ಯೆ ಬಗೆಹರಿಸಲು ಹರಸಾಹಸ ಪಡುತ್ತಿರುವ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಇಂದು ಮಹತ್ವದ ಸಭೆ ನಡೆಸಿದರು. ಗುತ್ತಿಗೆ ವೈದ್ಯರ ಸೇವೆ ಕಾಯಂಗೊಳಿಸುವ ಸಂಬಂಧ ವೈದ್ಯರ ಸಂಘದ ಪದಾಧಿಕಾರಿಗಳ ಜೊತೆ ನಡೆದ ಈ ಸಭೆ ಕುತೂಹಲದ ಕೇಂದ್ರಬಿಂದುವಾಯಿತು.

ಸಭೆಯಲ್ಲಿನ ಚರ್ಚೆ ಹಾಗೂ ತೀರ್ಮಾನಗಳ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಚಿವ ಶ್ರೀರಾಮುಲು, 507 ಗುತ್ತಿಗೆ ವೈದ್ಯರನ್ನು ನೇರ ನೇಮಕಾತಿ ಸಂದರ್ಭದಲ್ಲಿ ಅವರ ಸೇವೆಯನ್ನು ಪರಿಗಣಿಸಿ ಕೃಪಾಂಕ ನೀಡುವುದರ ಮೂಲಕ ಕಾಯಂ ನೇಮಕಾತಿಗೆ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

 

Related posts