ಸರ್ಕಾರದ ವಿರುದ್ಧ ಸಮರ; ಇದೀಗ ವಾಹನ ಚಾಲಕರ ಸರದಿ.

ಬೆಂಗಳೂರು: ಚಾಲಕರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅರೆಬೆತ್ತಲೆ ಮೆರವಣಿಗೆ ಕೈಗೊಂಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾವಿರಾರು ಚಾಲಕರೊಂದಿಗೆ ಉಪವಾಸ ಸತ್ಯಾಗ್ರಹ ನಡೆಸಿ ಶಕ್ತಿ ಪ್ರದರ್ಶನ ಏರ್ಪಡಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.1ರಿಂದ ಚಾಲಕರ ಒಕ್ಕೂಟದ ವತಿಯಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಚಾಲಕರ ನಿಗಮ ಮಂಡಳಿ, ಪೆಟ್ರೋಲ್ ಮತ್ತು ಡಿಸೆಲ್ ದರ ಇಳಿಕೆ ತುರ್ತಾಗಿ ಮಾಡಬೇಕು, ಸಾರಥಿ ಸೂರು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಕಾಲಕರ ದಿನಾಚರಣೆ ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದಾರೆ. ಸುಮಾರು 110 ಸಂಘಟನೆಗಳ ಮುಖ್ಯಸ್ಥರು ಬೆಂಬಲ ಸೂಚಿಸಿವೆ

Related posts