ಡ್ರಗ್ಸ್ ಬಗ್ಗೆ ಸುಳ್ಳು ಸುದ್ದಿ; ನಟಿ ಶರ್ಮಿಳಾ ಮಾಂಡ್ರೆ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿನ ಡ್ರಗ್ ಮಾಫಿಯಾ ವಿಚಾರ ಭಾರೀ ಸುದ್ದಿಯಾಗುತ್ತಿರುವಾಗಲೇ ಕೆಲ ಸುದ್ದಿಗಳ ಬಗ್ಗೆ ನಟಿ ಶರ್ಮಿಳಾ ಮಾಂಡ್ರೆ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವನಟಿ ಶರ್ಮಿಳಾ ಮಾಂಡ್ರೆ, ಕೆಲವು ಸುದ್ದಿ ವಾಹಿನಿಗಳಲ್ಲಿ ನನ್ನ ವಿರುದ್ಧ ಬಂದಿರುವ ಸುಳ್ಳು ಮತ್ತು ತಮಾಷೆಯ ಆರೋಪಗಳಿಂದ ನನಗೆ ಬಹಳ ನೋವಾಗಿದೆ. ಡ್ರಗ್ ದಂಧೆ ಆರೋಪದಲ್ಲಿ ನನ್ನ ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಾನು ಹಿಂಜರಿಯುವುದಿಲ್ಲ ಎಂದು ಶರ್ಮಿಳಾ ಮಾಂಡ್ರೆ ಎಚ್ಚರಿಕೆ ನೀಡಿದ್ದಾರೆ.

Related posts