ಕೇಂದ್ರ ಸಚಿವ ಸದಾನಂದ ಗೌಡ ಚೇತರಿಕೆ; ವೈದ್ಯರ ಹೇಳಿಕೆ

ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಸದಾನಂದ ಗೌಡ ಚೇತರಿಸಿಕೊಳ್ಳುತ್ತಿದ್ದಾರೆ. ಸಚಿವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸದಾನಂದಗೌಡರು, ನನ್ನ ಆರೋಗ್ಯ ಸುಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮಾಗಿದ್ದೇನೆ ಎಂದಿದ್ದಾರೆ.

ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್ ಗಳು ಸಹಜವಾಗಿವೆ. ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದವರು ಹೇಳಿದ್ದಾರೆ.

Related posts