ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಕೇಸಿನಲ್ಲಿ ಜಾರ್ಜ್‌, ಪ್ರಸಾದ್‌ ನಿರ್ದೋಷಿ

ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಕೇಸಿನಲ್ಲಿ ಮಾಜಿ ಸಚಿವ ಕೆ.ಜೆ. ಜಾರ್ಜ್‌ ನಿರ್ದೋಷಿಯಾಗಿದ್ದರೆ. ಪ್ರಕರಣ ಕುರಿತು ತನಿಖೆ ಕೈಗೊಂಡ ಸಿಬಿಐ ಜಾರ್ಜ್‌ ಐಪಿಎಸ್‌ ಅಧಿಕಾರಿಗಳಾದ ಪ್ರಣವ್‌ ಮೊಹಂತಿ, ಎ.ಎಂ. ಪ್ರಸಾದ್‌ ಅವರಿಗೆ ಕ್ಲೀನ್‌ಚಿಟ್‌ ನೀಡಿದೆ.

ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ್ದ ಈ ಪ್ರಕರಣದಲ್ಲಿ ಆಗ ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರ ತಲೆ ದಂಡವಾಗಿತ್ತು. ಈ ಪ್ರಕರಣ ಕುರಿತು ಉನ್ನತಮಟ್ಟದ ತನಿಖೆ ನಡೆಯಬೇಕೆಂಬ ಕೂಗು ಕೂಡಾ ಕೇಳಿ ಬಂದಿತ್ತು. ಹಾಗಾಗಿ ಸಿಬಿಐ ತನಿಖೆಗೆ ವಹಿಸಲಾಗಿತ್ತು.

ಇದೀಗ ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳಿಸಿದ ಸಿಬಿಐ ಮಡಿಕೇರಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಗಣಪತಿ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದ ದಿಲ್ಲಿಯ ಏಮ್ಸ್‌ ಆಸ್ಪತ್ರೆಯ ವೈದ್ಯರು, ಗಣಪತಿ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದರು. ಈ ವರದಿ ಹಿನ್ನೆಲೆಯಲ್ಲಿ ಗಣಪತಿ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ ಎಂದು ಸಿಬಿಐ ಹೇಳಿದೆ.

ಇದೇ ವೇಳೆ, ಅಂದು ಸಚಿವರಾಗಿದ್ದ ಜಾರ್ಜ್‌, ಪೊಲೀಸ್ ಅಧಿಕಾರಿಗಳಾದ ಮೊಹಂತಿ, ಎ.ಎಂ.ಪ್ರಸಾದ್‌ ಅವರು ಗಣಪತಿ ಅವರಿಗೆ ಕಿರು ಕುಳ ನೀಡಿದ್ದರು ಎಂಬ ಆರೋಪಕ್ಕೂ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದಿರುವ ಸಿಬಿಐ, ಕೌಟುಂಬಿಕ ಕಾರಣಗಳಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಹೇಳಿದೆ.

Related posts