ಬೆಂಗಳೂರಿನಲ್ಲಿ ಮಹಿಳಾ ಡಿವೈಎಸ್ಪಿ ನೇಣಿಗೆ ಶರಣು

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪಪೊಲೀಸ್ ಅಧೀಕ್ಷಕಿಯೊಬ್ಬರು ಆತ್ಮಹತ್ಯಗೆ ಶರಣಾಗಿದ್ದಾರೆ.
ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿವೈಎಸ್ಪಿ ಲಕ್ಷ್ಮೀ ನೇಣಿಗೆ ಶರಣಾಗಿದ್ದಾರೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣಾವ್ಯಾಪ್ತಿಯಲ್ಲಿ ಪರಿಚಿತರ ಮನೆಯಲ್ಲಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಅವರು ಇದ್ದಕ್ಕಿದ್ದಂತೆ ಕೊಠಡಿಯೊಳಗೆ ತೆರಳಿ ನೇಣಿಗೆ ಶರಣಾಗಿದ್ದಾರೆನ್ನಲಾಗಿದೆ. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

Related posts