ಮಾಜಿ ಸಚಿವ ಎಂ.ಸಿ. ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ ವಿಧಿವಶ

ಬೆಂಗಳೂರು: ಮಾಜಿ ಸಚಿವ ಎಂ.ಸಿ. ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ ವಿಧಿವಶರಾಗಿದ್ದಾರೆ. ಸಿಂಧಗಿ ಶಾಸಕರಾಗಿರುವ ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಜ. 9ರಂದು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಎಂ.ಸಿ. ಮನಗೂಳಿ ಗುರುವಾರ ನಸುಕಿನ ಜಾವ 1ಗಂಟೆಗೆ ಕೊನೆಯುಸಿರೆಳೆದಿದ್ದಾರೆ.. ವಿಜಯಪುರದ ಸಿಂಧಗಿ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿದ್ದ ಅವರು ಪತ್ನಿ, ನಾಲ್ವರು ಗಂಡು ಮಕ್ಕಳು, ಒಬ್ಬ ಹೆಣ್ಣುಮಗಳು ಮತ್ತು ಮೊಮ್ಮಕ್ಕಳನ್ನ ಅಗಲಿದ್ದಾರೆ.

ಜೆಎಚ್ ಪಟೇಲ್ ನೇತೃತ್ವದ ಜನತಾ ದಳ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದರು. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದಲ್ಲೂ ಅವರು ತೋಟಗಾರಿಕಾ ಸಚಿವರಾಗಿದ್ದರು.

 

Related posts