ರೈತರ ಪ್ರತಿಭಟನೆ ಹಿನ್ನೆಲೆ; ಬೆಂಗಳೂರು ತುಂಬೆಲ್ಲಾ ಖಾಕಿ ಬಂದೋಬಸ್ತ್

ಬೆಂಗಳೂರು: ದೆಹಲಿಯಲ್ಲಿನರೈತರ ಪ್ರತಿಭಟನೆಯನ್ನು ಬೆಂಬಲಿಸಿ ಗಣರಾಜ್ಯೋತ್ಸವ ದಿನವಾದ ಮಂಗಳವಾರ ರಾಜ್ಯದಲ್ಲೂ ರೈತರು ಟ್ರಾಕ್ಟರ್ ಪೆರೇಡ್ ನಡೆಸಲು ವಿವಿಧ ಸಂಘಟನೆಗಳು ನಿರ್ಧರಿಸಿವೆ.

ರಾಜ್ಯದ ವಿವಿಧೆಡೆಯಿಂದ ಆಗಮಿಸಲಿರುವ ರೈತರು ಮುಂಜಾನೆಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಲಿದ್ದಾರೆ. ವಿವಿಧೆಡೆಯಿಂದ ಹಲವು ತಂಡಗಳಲ್ಲಿ ಮೆರವಣಿಗೆ ನಡೆಸಿ ರೈತ ನಾಯಕ ಕೊಇಹಲ್ಲಿ ಚಂದ್ರಶೇಖರ್ ನೇತೃತ್ವದಲ್ಲಿ ಫ್ರೀಡಂ ಪಾರ್ಕ್​​​ ಸಮಾವೇಶಗೊಳ್ಳಲಿದೆ.

ರೈತರ ಈ ಪ್ರತಿಭಟನೆ ಹಿನ್ನೆಲೆ ಬೆಂಗಳೂರು ನಗರದಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್​​ ವ್ಯವಸ್ಥೆ ಮಾಡಿದ್ದಾರೆ. ಸುಮಾರು 2 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಅಖಾಡದಲ್ಲಿ ಕಿಸಾನ್ ಕಾಂಗ್ರೇಸ್

ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ರಾಜ್ಯದಲ್ಲಿ ಸಚಿನ್ ಮಿಗಾ ನೇತೃತ್ವದಲ್ಲಿ ಸರಣಿ ಪ್ರತಿಭಟನೆಗಳನ್ನು ನಡೆಸಿರುವ ಕಿಸಾನ್ ಕಾಂಗ್ರೆಸ್, ಜನವರಿ 26ರಂದು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ಹೋರಾಟವನ್ನು ಯಶಸ್ವಿಗೊಳಿಸಲು ಪಣತೊಟ್ಟಿದೆ.

ಈ ಕುರಿತು ಹೇಳಿಕೆ ನೀಡಿರುವ ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮಿಗಾ, ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜನವರಿ 26ರಂದು ರೈತ ವಿರೋದಿ ಮಸೂದೆಯನ್ನು ವಿರೋಧಿಸಿ ನಡೆಸಲಿದೆ.  ಅಂದು ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನೆಡೆಯಲಿರುವ ಟ್ರಾಕ್ಟರ್ ಚಳುವಳಿಯನ್ನು ಕರ್ನಾಟಕ ಕಿಸಾನ್ ಕಾಂಗ್ರೆಸ್ ಬೆಂಬಲಿಸಲಿದೆ ಎಂದು ಘೋಷಿಸಿದ್ದಾರೆ. ಅಂದು ಟ್ರಾಕ್ಟರ್‌‌ಗಳೊಂದಿಗೆ  ಕಿಸಾನ್ ನಾಯಕರು, ಪದಾಧಿಕಾರಿಗಳು ಬಾಗವಹಿಸುತ್ತಾರೆ ಎಂದವರು ಹೇಳಿದ್ದಾರೆ.ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಕಿಸಾನ್ ಕಾಂಗ್ರೆಸ್ ವತಿಯಿಂದ ಟ್ರಾಕ್ಟರ ಚಳುವಳಿ ನಡೆಸಲಾಗುವುದು ಎಂದು ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ತಿಳಿಸಿದ್ದಾರೆ.

Related posts