ಕೆಂಪುಕೋಟೆ ದಾಂಧಲೆ ನಂತರ ರೈತರ ಹೋರಾಟದಿಂದ ‘ಕೈ’ ಯು-ಟರ್ನ್?

ದೆಹಲಿ : ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಿಂದ ಕಾಂಗ್ರೆಸ್ ಯು ಟರ್ನ್ ಹೊಡೆದಂತಿದೆ. ಗಣರಾಜ್ಯದಿನದಂದು ರೈತರ ಹೋರಾಟ ಸಂದರ್ಭದಲ್ಲಿ ನಡೆದ ಘಟನೆ ಕಾನೂನಿಗೆ ವಿರುದ್ಧವಾಗಿದೆ ಎಂಬ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಕೈ ನಾಯಕರೂ ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿ, ನಾನು ಮೊದಲಿನಿಂದಲೂ ರೈತರ ಪ್ರತಿಭಟನೆಯನ್ನು ಬೆಂಬಲಿಸುತ್ತಿದ್ದೆ. ಆದರೇ, ಇಂದು ಅವರು ಕಾನೂನು ಬಾಹೀರವಾಗಿ ನಡೆದುಕೊಂಡದ್ದನ್ನು ಕ್ಷಮಿಸುವುದಕ್ಕೆ ಸಾದ್ಯವಿಲ್ಲ ಎಂದಿದ್ದಾರೆ. ಈ ಮೂಲಕ ಅವರು ರೈತರ ಹೋರಾಟದಿಂದ ಹಿಂದಕ್ಕೆ ಸರಿಯುವ ಪರೋಕ್ಷ ಸುಳಿವು ನೀಡಿದ್ದಾರೆ.

Related posts