ವಿಶಾಖಪಟ್ಟಣದಲ್ಲಿ ಮತ್ತೊಂದು ಅನಿಲ ದುರಂತ

ವಿಶಾಖಪಟ್ಟಣ: ಕೆಲ ಸಮಯದ ಹಿಂದೆ ಭೀಕರ ಅನಿಲ ದುರಂತಕ್ಕೆ ಸಾಕ್ಷಿಯಾದ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಮತ್ತೊಂದು ಅನಿಲ ದುರಂತ ಸಂಭವಿಸಿದೆ. ಫಾರ್ಮಾ ಕಂಪೆನಿಯೊಂದರಲ್ಲಿ ಅನಿಲ ಸೋರಿಕೆಯಾಗಿದ್ದು, ಈ ದುರ್ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಅಸ್ವಸ್ಥಗೊಂಡು ಆಸ್ಪತ್ರೆಪಾಲಾಗಿದ್ದಾರೆ.

ಸೈನರ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್’ ಕಾರ್ಖಾನೆಯಲ್ಲಿ ಈ ದುರ್ಘಟನೆ ನಡೆದಿದ್ದು ತಡ ರಾತ್ರಿ 11.30ರ ವೇಳೆ ಬೆಂಜಿಮಿಡಾಜೋಲ್ ಎಂಬ ವಿಷಾನಿಲ ಸೋರಿಕೆಯಾಗಿದೆ ಎನ್ನಲಾಗಿದೆ. ದುರಂತ ಘಟಿಸಿದ ವೇಳೆ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ.

ಈ ಘಟನೆ ನಂತರ ಆ ಕಾರ್ಖಾನೆಯನ್ನು ಮುಚ್ಚಲಾಗಿದ್ದು ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.

Related posts