ರಾಜ್ಯದಲ್ಲಿ ಗೋಹತ್ಯೆ ನಿಷೇಧ; ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

ಚಿಕ್ಕಬಳ್ಳಾಪುರ: ಮನೆ ಸದಸ್ಯನಂತಿರುವ ಗೋವನ್ನು ಹತ್ಯೆ ಮಾಡುವುದು ಮಹಾಪಾಪ. ಗೋಹತ್ಯೆ ನಿಷೇಧಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಜಾಗೃತಿ ಆಂದೋಲನವನ್ನು ಕೂಡ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ವೆಂಕಟೇಶ್ವರ ಗೋಶಾಲೆ ಉದ್ಘಾಟಿಸಿ ಮಾತನಾಡಿದ ಅವರು, ಗೋಹತ್ಯೆಯನ್ನು ಎಲ್ಲ ಸರ್ಕಾರಗಳು ನಿಷೇಧಿಸಬೇಕು. ಗೋಮಾಂಸದ ರಫ್ತನ್ನು ಕೂಡ ನಿಷೇಧಿಸಬೇಕು. ಪಶ್ಚಿಮದ ದೇಶಗಳಲ್ಲಿ ನಾಲಿಗೆ ಚಪಲಕ್ಕೆ ಏನು ಬೇಕಾದರೂ ತಿನ್ನುತ್ತಾರೆ. ಆದರೆ ಭಾರತೀಯರಾಗಿ ನಾವು ಗೋಹತ್ಯೆ ಮಾಡಬಾರದು. ಇದನ್ನು ನಾನು ಬಲವಾಗಿ ವಿರೋಧಿಸುತ್ತೇನೆ ಎಂದರು.

ಭಾರತೀಯ ಸಂಪ್ರದಾಯದಲ್ಲಿ ಗೋವಿಗೆ ವಿಶೇಷ ಸ್ಥಾನಮಾನವಿದೆ. ವಯಸ್ಸಾಗಿದೆ ಎಂಬ ಕಾರಣಕ್ಕೆ ಹಸುವನ್ನು ಮಾರಾಟ ಮಾಡಬಾರದು. ಹಸು ಮನುಷ್ಯನಿಗೆ ಎಲ್ಲವನ್ನೂ ನೀಡುವ ಕಾಮಧೇನುವಾಗಿದೆ. ಆದ್ದರಿಂದ ಗೋಹತ್ಯೆ ಮಾಡಬಾರದು ಎಂದವರು ಹೇಳಿದ್ದಾರೆ. ಗೋಮಾಂಸ ರಫ್ತು ನಿಷೇಧಕ್ಕೆ ಎರಡೂ ಸದನಗಳಲ್ಲಿ ಸಾಕಷ್ಟು ಚರ್ಚೆಯಾಗಬೇಕಿದೆ. ನಮ್ಮ ಪಕ್ಷ ಈ ವಿಚಾರದಲ್ಲಿ ದೃಢ ಸಂಕಲ್ಪ ಹೊಂದಿದೆ. ಶೀಘ್ರದಲ್ಲೇ ರಫ್ತು ನಿಷೇಧ ಆಗಲಿದೆ ಎಂದು ಸಚಿವ ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.

ನಮ್ಮ ಮನೆಯಲ್ಲೂ ಸುಮಾರು 50 ಹಸುಗಳಿದ್ದವು. ಆಗ ನಮ್ಮ ಅಜ್ಜ ರಾತ್ರಿಯಲ್ಲೂ ಹಸುಗಳಿಗೆ ಮೇವು ಹಾಕುತ್ತಿದ್ದರು. ಹಸುವಿನ ಸಗಣಿ ಸ್ಯಾನಿಟೈಜರ್ ನಂತೆ ಸೂಕ್ಷ್ಮ ರೋಗನುಗಳನ್ನೂ ನಾಶಪಡಿಸುವ ಶಕ್ತಿ ಹೊಂದಿದೆ. ಆದ್ದರಿಂದ ಸಗಣಿಯಲ್ಲಿ ನೆಲ ಸಾರಿಸುತ್ತಾರೆ ಎಂದು ಅವರು ಹೇಳಿದರು.

Related posts