ಗ್ರಾಮ ಪಂಚಾಯತಿ ಚುನಾವಣೆಗೆ ದಿನಾಂಕ ಘೋಷಣೆ

ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ರಾಜ್ಯ ಚುನಾವಣಾ ಆಯೋಗವು ಚುನಾವಣೆ ದಿನಾಂಕವನ್ನು ಘೋಷಿಸಿದೆ. ರಾಜ್ಯದ 30 ಜಿಲ್ಲೆಗಳ 5762 ಗ್ರಾಮ ಪಂಚಾಯತಿಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ಡಿಸೆಂಬರ್ 22ರಂದು ಹಾಗೂ ಎರಡನೇ ಹಂತದ ಮತದಾನ ಡಿ.27ರಂದು ನಡೆಯಲಿದೆ. ಚುನಾವಣೆ ನಡೆಯಲಿದೆ. ಚುನಾವಣೆ ನಡೆಯಲಿದೆ. ಒಟ್ಟು 92,121 ಸದಸ್ಯರ ಆಯ್ಕೆ ನಡೆಯಲಿದೆ.

ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆ ತನಕ ಮತದಾನ ನಡೆಯಲಿದ್ದು, ಕೋವಿಡ್ ಪಾಸಿಟಿವ್ ಇರುವ ರೋಗಿಗಳಿಗೆ ಮತ ಹಾಕಲು ಕೊನೆಯ ಒಂದು ಗಂಟೆಗೆ ಅವಕಾಶ ಕೊಡಲಾಗುವುದು. ಮತಗಳ ಎಣಿಕೆ ಡಿಸೆಂಬರ್ 30ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

ಡಿಸೆಂಬರ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಡಿಸೆಂಬರ್ 11 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಮೊದಲ ಹಂತದಲ್ಲಿ 113 ತಾಲೂಕುಗಳ 2930 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ. ಎರಡನೇ ಹಂತದಲ್ಲಿ 113 ತಾಲೂಕುಗಳ 2832 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.

Related posts