ಗ್ರಾಮ ಪಂಚಾಯಿತಿ ಫಲಿತಾಂಶ ಸಮಾಧಾನ ತಂದಿದೆ; ಡಿಕೆಶಿ

ಬೆಂಗಳೂರು: ‘ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇನ್ನು ಪೂರ್ಣ ಪ್ರಮಾಣದಲ್ಲಿ ಬರಬೇಕಿದೆ. ಈವರೆಗಿನ ಫಲಿತಾಂಶದಲ್ಲಿ ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಸಾಧನೆ ಸಮಾಧಾನ ತಂದಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣಾ ಆಯೋಗ ಈ ಫಲಿತಾಂಶವನ್ನು ಯಾವುದೇ ಪಕ್ಷ ತಮ್ಮ ಗೆಲುವು ಎಂದು ಬಿಂಬಿಸಿಕೊಳ್ಳುವಂತಿಲ್ಲ ಎಂದು ವ್ಯಾಖ್ಯಾನ ನೀಡಿದೆ. ಮುಂದೆ ಜಿಲ್ಲಾ ಕಾಂಗ್ರೆಸ್ ಕಡೆಯಿಂದ ವರದಿ ತರಿಸಿಕೊಳ್ಳುತ್ತೇನೆ ಎಂದರು.

ನನ್ನ ಕ್ಷೇತ್ರದಲ್ಲೇ ಬಿಜೆಪಿ ಗೆದ್ದಿದೆ ಎಂದು ಹೇಳುತ್ತಿದ್ದೀರಿ. ಅಲ್ಲೇ ಹೋಗಿ ಯಾವ ಪಕ್ಷ ಬಂದಿದೆ ಎಂದು ನೋಡೋಣ ಬನ್ನಿ. ನಾವು ಅವಿರೋಧವಾಗಿ ಆಯ್ಕೆ ಮಾಡುವ ಶಕ್ತಿ ಇದ್ದರೂ ಸ್ಪರ್ಧೆ ಇರಲಿ ಎಂದು ಸುಮ್ಮನೆ ಇದ್ದೇವೆ. ಬಿಜೆಪಿಯಲ್ಲಿ ಯಾವ ಆಂತರಿಕ ಸಮಸ್ಯೆ ಇದೆಯೋ ಗೊತ್ತಿಲ್ಲ ಹೀಗಾಗಿ ಅವರು ಈ ರೀತಿ ಗೆದ್ದಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯಿತಿ ರಚನೆಯಾಗಲಿ ಯಾರು ಗೆದ್ದಿದ್ದಾರೆ ಎಂದು ಗೊತ್ತಾಗುತ್ತದೆ. ನಾವು ನಮ್ಮ ಸ್ಥಳೀಯ ನಾಯಕರಿಗೆ ಜವಾಬ್ದಾರಿ ವಹಿಸಿ ಚುನಾವಣೆ ಮಾಡಿದ್ದೇವೆ ಎಂದು ಡಿಕೆಶಿ ಹೇಳಿದರು.

Related posts