ಗುರುಪುರ ಬಾಂಗ್ಲಗುಡ್ಡ ಕುಸಿತ ಪ್ರಕರಣ; ಮೃತ ಬಾಲಕರ ಕುಟುಂಬದವರಿಗೆ ಪರಿಹಾರ

ಮಂಗಳೂರು: ಮಂಗಳೂರು ಹೊರವಲಯದ ಗುರುಪುರ ಬಳಿ ಬಾಂಗ್ಲಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಭಾನುವಾರ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು ಗುಡ್ಡ ಕುಸಿತ ಪ್ರಕರಣದಲ್ಲಿ ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಬಾಲಕರಿಬ್ಬರನ್ನು ಸುದೀರ್ಘ ಕಾರ್ಯಾಚರಣೆ ನಂತರ ಪತ್ತೆ ಮಾಡಲಾಗಿತ್ತು. ಆದರೆ ಬಾಲಕರ ಜೀವ ಉಳಿಸಲು ಸಾಧ್ಯವಾಗಿಲ್ಲ.

ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ ಬಾಲಕರ ಕುಟುಂಬದವರಿಗೆ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ಪ್ರಕಟಿಸಿದೆ.

ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 5ಲಕ್ಷ ರೂ. ಪರಿಹಾರ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

Related posts