ಪಾಕ್ ಉಗ್ರ ಹಫೀಜ್​ ಸಯೀದ್​ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ

ಲಾಹೋರ್: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜಮಾತ್​​-ಉದ್​-ದಾವಾ ಮುಖ್ಯಸ್ಥ ಹಫೀಜ್​ ಸಯೀದ್​ಗೆ ಪಾಕಿಸ್ತಾನದ ಕೋರ್ಟ್ 10 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.

ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಎಂದೇ ಗುರುತಾಗಿರುವ ಹಫೀಜ್​ ಸಯೀದ್ ಪಾಕ್ ನೆಲದಲ್ಲೂ ಉಗ್ರಗಾಮಿ ಕೃತ್ಯಗಳಿಗೆ ಹಣಕಾಸಿನ ನೆರವು ನೀಡುತ್ತಿದ್ದ ಎಂಬ ಆರೋಪಕ್ಕೆ ಗುರಿಯಾಗಿದ್ದ.

ಕಳೆದ ವರ್ಷ ಜುಲೈನಲ್ಲಿ ನಡೆದ ವಿದ್ವಾಂಸಕ ಕೃತ್ಯಗಳಿಗೆ ಹಣಕಾಸಿನ ನೆರವು ನೀಡಿದ ಆರೋಪದಲ್ಲಿ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್11 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಗುರುವಾರ ಮತ್ತೆರಡು ಪ್ರಕರಣಗಳಲ್ಲಿ ಕೋರ್ಟ್​ ಹಫೀಜ್ ಗೆ ಕೋರ್ಟ್ ಮತ್ತೆ 10 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.

Related posts