ಹತ್ರಾಸ್ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶದ ಅಲೆ

ಕೋಲ್ಕತಾ: ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶದ ಅಲೆ ಎಬ್ಬಿಸಿದೆ. ಈ ಪ್ರಕರಣವನ್ನು ಖಂಡಿಸಿರುವ ರಾಜಕೀಯ ಮುಖಂಡರು ಉತ್ತರಪ್ರದೇಶ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯನ್ನು ಖಂಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಆಡಳಿತದಲ್ಲಿ ದಲಿತರು ಮತ್ತು ಹೆಣ್ಣುಮಕ್ಕಳ ಸುರಕ್ಷತೆ ದೊಡ್ಡ ತಮಾಷೆಯಾಗಿ ಪರಿಣಮಿಸಿದೆ ಎಂದಿದ್ದಾರೆ.

Related posts